ಬೆಂಗಳೂರು
ದಲಿತ ಮುಖಂಡರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ಸಿನವರೇ ತುಳಿಯುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮಾಡಿರುವ ಟೀಕೆಗೆ ತೀಕ್ಞ್ಣವಾಗಿ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ನಿಮ್ಮ ಪಕ್ಷದಿಂದ ಎಷ್ಟು ಜನ ದಲಿತರಿಗೆ ಮಂತ್ರಿ ಸ್ಥಾನ ನೀಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ರೇವಣ್ಣ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, “ಕಾಂಗ್ರೆಸ್ ಪಕ್ಷ ದಲಿತರೂ ಸೇರಿದಂತೆ ಎಲ್ಲವರ್ಗಗಳಿಗೂ ಸಮಾನ ಅವಕಾಶ ನೀಡುತ್ತಾ ಬಂದಿದೆ. ಕಾಂಗ್ರೆಸ್ ಟೀಕಿಸಿರುವ ರೇವಣ್ಣ ಅವರು ತಮ್ಮ ಪಕ್ಷದಿಂದ ಎಷ್ಟು ಜನ ದಲಿತರನ್ನು ಮಂತ್ರಿಗಳನ್ನಾಗಿ ಮಾಡಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.
“ಕಾಂಗ್ರೆಸ್ ಪಕ್ಷ ಸಮಾನತೆಯ ತತ್ವದಲ್ಲಿ ನಂಬಿಕೆ ಇಟ್ಟಿದೆ. ಹೀಗಾಗಿ ರೇವಣ್ಣ ಅವರ ಮಾತು ಸತ್ಯಕ್ಕೆ ದೂರವಾದುದು,” ಎಂದು ದೇಶಪಾಂಡೆ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ