ಬೆಂಗಳೂರು
ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಕಳೆದ ಎರಡು ದಿನಗಳಿಂದ ಎರಡು ಬಾರಿ ಏರಿಕೆ ಮಾಡಿರುವುದನ್ನು ರಾಜ್ಯ ಕಾಂಗ್ರೆಸ್ ಟೀಕಿಸಿದೆ.ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದರೂ ಭಾರತದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿ, ಯೋಜಿತವಲ್ಲದ ಲಾಕ್ಡೌನ್ ನಿಂದ ಇಡೀ ದೇಶ ಆರ್ಥಿಕ ಸಂಕಷ್ಟದಲ್ಲಿರುವಾಗ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಎಳೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಅಧಿಕೃತ ಟ್ವೀಟ್ ನಲ್ಲಿ ಬರೆಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
