ಬೆಂಗಳೂರು:
ಈ ಹಿಂದೆ ಇದ್ದ ಸಮ್ಮಿಶ್ರ ಸರ್ಕಾರ ಪತನಕ್ಕೆ ನಾಂದಿ ಹಾಡಿದ್ದ ಆಪರೇಷನ್ ಕಮಲ ಪ್ರಕರಣವನ್ನು ಮೂಲಾಧಾರವಾಗಿಟ್ಟುಕೊಂಡು ಬಿಜೆಪಿ ಮುಖಂಡರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಎಸಿಬಿ ಗೆ ದೂರು ಸಲ್ಲಿಸಲಾಗಿದೆ.
ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಇತರೆ ಬಿಜೆಪಿ ನಾಯಕರು ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರಿಗೆ 5 ಕೋಟಿ ರೂ. ಹಣವನ್ನು ಲಂಚದ ರೂಪದಲ್ಲಿ ನೀಡಿ ಪಕ್ಷಾಂತರ ಮಾಡುವಂತೆ ಒತ್ತಡ ಹೇರಿದ್ದರು. ಈ ಬಗ್ಗೆ ಜುಲೈ ತಿಂಗಳಲ್ಲಿ ನಡೆದ ಅಧಿವೇಶನದಲ್ಲಿ ಈ ಪ್ರಕರಣ ಬಹಿರಂಗವಾಗಿದ್ದು, ಎಲ್ಲಾ ಮಾಹಿತಿಗಳನ್ನು ಕಡತದಲ್ಲಿ ದಾಖಲು ಮಾಡುವಂತೆ ಅಂದಿನ ಸಭಾಧ್ಯಕ್ಷ ರಮೇಶ್ ಕುಮಾರ್ ಸೂಚಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಆಪರೇಷನ್ ಕಮಲದ ಪ್ರಕರಣ ರಾಜ್ಯವ್ಯಾಪಿ ಹರಡಿರುವುದರಿಂದ ಈ ಬಗ್ಗೆ ಎಸಿಬಿ ದೂರು ದಾಖಲಿಸಿಕೊಂಡು ಸತ್ಯಾಂಶ ಬಹಿರಂಗಪಡಿಸಿ ಎಂದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
