ರೆಡ್ಡಿ ಸಮುದಾಯಕ್ಕೆ ಅನ್ಯಾಯ ಮಾಡಿದ ಕಾಂಗ್ರೇಸ್

ಬೆಂಗಳೂರು

      ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರಿಗೆ ಸಂಪುಟ ಪುನಾ ರಚನೆಯಲ್ಲಿ ಸಚಿವ ಸ್ಥಾನ ನೀಡದೇ, ಕಾಂಗ್ರೆಸ್ ಪಕ್ಷ ರೆಡ್ಡಿ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ರಾಜ್ಯ ರೆಡ್ಡಿ ಜನ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಚ್.ಎನ್.ವಿಜಯರಾಘವ ರೆಡ್ಡಿ, ರಾಜ್ಯದಲ್ಲಿ 50 ಲಕ್ಷಕ್ಕಿಂತ ಹೆಚ್ಚು ರೆಡ್ಡಿ ಸಮುದಾಯದ ಜನರಿದ್ದಾರೆ. ಆದರೂ, ಜನಾಂಗದ ಹಿರಿಯ ರಾಜಕಾರಣಿ ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ನೀಡದಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

         ರಾಮಲಿಂಗಾ ರೆಡ್ಡಿ ಅವರು ಸತತ 7 ಬಾರಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಅನೇಕ ಖಾತೆಗಳನ್ನು ಕಾರ್ಯನಿರ್ವಹಿಸಿದ ಅನುಭವವುಳ್ಳವರಾಗಿದ್ದಾರೆ. 2018ನೇ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು ಸೋಲು ಅನುಭವಿಸಿದರೂ, ಅವರು ಮಾತ್ರ ನಿರಂತರವಾಗಿ ಗೆಲವು ಸಾಧಿಸಿದ್ದಾರೆ. ಆದರೂ ಅವರಿಗೆ ಸಚಿವ ಸ್ಥಾನ ನೀಡದೆ ರೆಡ್ಡಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

        ಸಂಘದ ಉಪಾಧ್ಯಕ್ಷ ಜಿ.ಎನ್.ಮುನಿರಾಯಪ್ಪ ರೆಡ್ಡಿ ಮಾತನಾಡಿ, ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಈ ಹಿಂದೆಯೇ ನಾವು ಸರ್ಕಾರಕ್ಕೆ ಆಗ್ರಹಿಸಿದ್ದೆವು. ಆದರೆ, ನಮ್ಮ ಮನವಿಯನ್ನು ಪರಿಗಣಿಸದಿರುವುದು ನಿರಾಸೆ ಮೂಡಿಸಿದೆ. ಪಕ್ಷ ಸಂಘಟಿಸಿದ ನಾಯಕನನ್ನು ಕಾಂಗ್ರೆಸ್ ಪಕ್ಷ ಕೈಬಿಟ್ಟಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಸಚಿವ ಸ್ಥಾನ ತೆರವಾದಲ್ಲಿ ಇವರಿಗೆ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ, ಇದರ ಪರಿಣಾಮವನ್ನು ಮುಂದಿನ ಚುನಾವಣೆಯಲ್ಲಿ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap