ವಿಜಯಪುರ :
ನಗರದ ಕಾಂಗ್ರೆಸ್ ಪ್ರಮುಖ ನಾಯಕಿಯೊಬ್ಬರನ್ನು ಕೊಲ್ಹಾರ ಪಟ್ಟಣದ ಬ್ರಿಡ್ಜ್ ಕೆಳಗೆ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ .
ಮೃತರನ್ನು ರೇಷ್ಮಾ ಎಂದು ಗುರುತಿಸಲಾಗಿದೆ ವರನ್ನು ಕೊಲೆ ಮಾಡಿ ಇಲ್ಲಿಗೆ ತಂದು ಎಸೆಯಲಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.
ಸೊಲ್ಲಾಪುರದ ಎಂಐಎಂ ಮುಖಂಡರೊಂದಿಗೆ ನಿನ್ನೆ ರಾತ್ರಿ ರೇಷ್ಮಾ ತೆರಳಿದ್ದರು ಎಂದು ತಿಳಿದು ಬಂದಿದೆ .ಬಲಗೈಗೆ ಎರಡು ಮಚ್ಚಿನ ಏಟುಗಳು ಕಂಡು ಬಂದಿದ್ದು , ಮುಖಕ್ಕೆ ಗುದ್ದಿರುವ ಗಾಯಗಳು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಾತುಕತೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.
ರೇಷ್ಮಾ ಅವರು 2014 ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್‌ನಿಂದ ಕಣಕ್ಕಿಳಿದು ಸೋಲು ಕಂಡಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷೆಯಾಗಿಯೂ ಅಗಿದ್ದ ಅವರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು ಎಂದು ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ಮುಂದುವರಿಸಿದ್ದಾರೆ.