ಇನ್ನೊಂದು ವಾರದೊಳಗೆ ಕಾಂಗ್ರೆಸ್ ಅಂತಿಮ ಪಟ್ಟಿ…!!!

ಬೆಳಗಾವಿ:

      ಕಾಂಗ್ರೆಸ್ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಇನ್ನೊಂದು ವಾರದೊಳಗೆ ಪೂರ್ಣಗೊಂಡು ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ ಎಂದು ಅರಣ್ಯಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

       ಬೆಳಗಾವಿಯಲ್ಲಿ ಇಂದು ಚುನಾವಣೆ ನಿಮಿತ್ಯ ನಡೆಸಲಾದ ಪಕ್ಷದ ಕಾರ್ಯಕರ್ತರ ಸಭೆಯ ನಂತರ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯದ ಮುಖಂಡರಿಂದ ಈಗಾಗಲೇ ಒಂದು ಹಂತದವರೆಗೆ ಚರ್ಚೆ ಆಗಿದೆ. ಇನ್ನೇನಿದ್ದರೂ ದೆಹಲಿಯಲ್ಲಿ ಅಂತಿಮ ಹಂತದ ನಿರ್ಣಯ ಬಾಕಿ ಉಳಿದಿದೆ. ಟಿಕೇಟ್ ಹಂಚಿಕೆ ಕಾರ್ಯ ಒಂದೆಡೆ ನಡೆದಿದ್ದರೂ ಪಕ್ಷದ ಸಂಘಟನೆಯ ಕೆಲಸುಗಳು

        ಇನ್ನೊಂದೆಡೆ ವಿಭಿನ್ನ ಕಾರ್ಯಕ್ರಮಗಳ ಹೆಸರಿನಲ್ಲಿ ನಡೆಸಲಾಗುತ್ತಿದೆ. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಅಭ್ಯರ್ಥಿಗಳಗುರುತಿಸುವಿಕೆಯಲ್ಲಿ ಯಾವುದೇ ರೀತಿ ಗೊಂದಲ ಇಲ್ಲ. ಅನೇಕರು ಅಕಾಂಕ್ಷಿಗಳಿದ್ದಾರೆ. ಹೈಕಮಾಂಡ ಯಾರಿಗೇ ಟಿಕೇಟ್ ನೀಡಿದರೂ ಅವರ ಪರವಾಗಿ ಪ್ರಚಾರ ಕಾರ್ಯಕ್ಕೆ ಎಲ್ಲಕಾರ್ಯಕರ್ತರು ಇಳಿಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

       ಮಂಡ್ಯ ಲೋಕಸಭೆಗೆ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಯ್ಕೆಯಾಗಿದ್ದ ಕಾರಣ, ಅದು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್ ಪಕ್ಷ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದೆ ಎಂದು ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap