ಚಿತ್ರದುರ್ಗ;
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಚಿತ್ರದುರ್ಗದ ಕ್ರೀಡಾಪಟು ಎನ್.ಡಿ.ಕುಮಾರ್ ಅವರನ್ನು ನೇಮಕ ಮಾಡಲಾಗಿದೆಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಅವರ ಆದೇಶದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಎನ್.ಡಿ.ಕುಮಾರ್ ಅವರು ಸುಮಾರು ಒಂದು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿಯೂ ಕೆಲಸ ಮಾಡಿದ್ದಾರೆ. ಅವರ ಪಕ್ಷ ನಿಷ್ಠೆಯನ್ನು ಗಮನಿಸಿ ಉನ್ನತ ಸ್ಥಾನ ನೀಡಲಾಗಿದೆ ಎಂದು ಎಂ.ಡಿ.ಲಕ್ಷ್ಮೀನಾರಾಯಣ ತಿಳಿಸಿದ್ದಾರೆ