ಅಧ್ಯಕ್ಷ-ಉಪಾಧ್ಯಕ್ಷಚುನಾವಣೆ: ಎಪಿಎಂಸಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ

0
12

ಮಧುಗಿರಿ :

    ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗುರುವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಟ್ಟು 16 ಮತಗಳಲ್ಲಿ ತಲಾ 9 ಮತಗಳನ್ನು ಗಳಿಸುವ ಮೂಲಕ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳು 20 ತಿಂಗಳ 2ನೇ ಅವಧಿಗೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಿಪ್ಪೇಸ್ವಾಮಿ ತಿಳಿಸಿದರು.

     ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಬಿ.ಮರಿಯಣ್ಣ ಅಧ್ಯಕ್ಷರಾಗಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜ್‍ಕುಮಾರ್ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾದ ನಾಮ ನಿದೇರ್ಶಿತ ಸದಸ್ಯರು ಸೇರಿದಂತೆ ಒಟ್ಟು 16 ಮತಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಲಾ 9 ಮತ ಪಡೆದು ಜಯಶೀಲರಾದರೆ, 7 ಮತ ಪಡೆದು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಪರಾಭವಗೊಂಡು ಮತ್ತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಮತ್ತೆ ಕೈ ವಶವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here