ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಖಚಿತ : ಶಾಸಕ ಟಿ.ರಘುಮೂರ್ತಿ ಅಭಿಮತ.

ಚಳ್ಳಕೆರೆ

       ಚಿತ್ರದುರ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ಇದುವರೆಗೂ ನಡೆದ ಲೋಕಸಭಾ ಕ್ಷೇತ್ರಗಳಲ್ಲಿ ಮೂರು ಬಾರಿ ಮಾತ್ರ ಇತರೆ ಪಕ್ಷಗಳು ಆಯ್ಕೆಯಾಗಿದ್ದು, ಇನ್ನುಳಿದ ಎಲ್ಲಾ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುವ ಮೂಲಕ ಇದು ಕಾಂಗ್ರೆಸ್‍ನ ಭದ್ರಕೋಟೆ ಎಂದು ಸಾಬೀತು ಪಡಿಸಿದ್ದಾರೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

        ಅವರು, ಗುರುವಾರ ತಾಲ್ಲೂಕಿನ ಟಿ.ಎನ್.ಕೋಟೆ, ಓಬಳಾಪುರ, ದೊಡ್ಡ ಚೆಲ್ಲೂರು, ಕಲಮರಹಳ್ಳಿ ಮುಂತಾದ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಮುಖಂಡರ ಸಹಯೋಗದೊಂದಿಗೆ ಮತಯಾಚನೆ ಮಾಡಿ ಮಾತನಾಡಿದರು. ಈ ಬಾರಿಯ ಲೋಕಸಭಾ ಚುನಾವಣೆಯ ವಿಶೇಷವೆಂದರೆ. ಕಾಂಗ್ರೆಸ್ ಪಕ್ಷ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು, 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 3 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು, ಜೆಡಿಎಸ್ ಪಕ್ಷ ಅ ಸಂದರ್ಭದಲ್ಲಿ 2.25 ಲಕ್ಷ ಮತಗಳನ್ನು ಪಡೆದಿತ್ತು.

        ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ನಮಗೆ ಹೆಚ್ಚು ಮತಗಳು ಲಭ್ಯವಾಗಲಿದ್ದು, ಬಾರೀ ಅಂತರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಆಯ್ಕೆಯಾಗುವುದು ಖಚಿತವೆಂದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಅಪಾರವಾದ ಕಾರ್ಯಕರ್ತರ ಪಡೆಯನ್ನು ಹೊಂದಿದೆ.

          ಎರಡೂ ಪಕ್ಷಗಳ ಕಾರ್ಯಕರ್ತರು ಒಂದಾಗಿ ಏ.18ರ ಮತದಾನದಲ್ಲಿ ಹೆಚ್ಚು ಮತಗಳು ಲಭಿಸುವ ನಿಟ್ಟಿಲ್ಲಿ ಕಾರ್ಯನಿರ್ವಹಿಸುತ್ತಾರೆ. ಜೆಡಿಎಸ್ ಪಕ್ಷ ಈಗಾಗಲೇ ಪಕ್ಷದ ಎಲ್ಲಾ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರಿಗೆ ಮತ ಚಲಾಯಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದರು

         ಜೆಡಿಎಸ್ ಯುವ ಮುಖಂಡ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆ ಎಲ್ಲಾ ರೀತಿಯಿಂದಲೂ ವಿಶೇಷತೆಯಿಂದ ಕೂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟ ಈ ಕ್ಷೇತ್ರದಲ್ಲಿ ಬಲವಾದ ಶಕ್ತಿಯನ್ನು ಹೊಂದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಿಜೆಪಿಯ ನಾರಾಯಣಸ್ವಾಮಿಗಿಂತ ಹೆಚ್ಚು ಮುನ್ನಡೆ ಪಡೆಯಲಿದ್ದಾರೆಂದರು.

         ನಗರಸಭಾ ಸದಸ್ಯರಾದ ವಿರೂಪಾಕ್ಷ, ಬಿ.ಟಿ.ರಮೇಶ್‍ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ಜಿ.ವೀರೇಶ್, ಕಾಂಗ್ರೆಸ್ ಮುಖಂಡರಾದ ಟಿ.ಪ್ರಭುದೇವ್, ಆರ್.ಪ್ರಸನ್ನಕುಮಾರ್, ಪಾಲಯ್ಯ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link