ಇ-ತ್ಯಾಜ್ಯವನ್ನು ಗಂಭೀರವಾಗಿ ಪರಿಗಣಿಸಿ : ಮೇಯರ್

ಬೆಂಗಳೂರು

      ಇ ತ್ಯಾಜ್ಯಗಳಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ 198 ವಾರ್ಡ್ ಗಳಲ್ಲೂ ಇ-ತ್ಯಾಜ್ಯ ಸಂಗ್ರಹ ಬಿನ್‍ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಹೇಳಿದರು.

     ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಹಾಗೂ ಬಿ-ರೆಸ್ಪಾನ್ಸಿಬಲ್ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ಇಂದಿನಿಂದ ಆ.15ರವರೆಗೆ ನಡೆಯುವ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಗ್ರಹಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ಎಲ್ಲ ಎಂಟು ವಲಯಗಳಲ್ಲಿ ಈಗಾಗಲೇ ಇ-ತ್ಯಾಜ್ಯ ಸಂಗ್ರಹ ಬಿನ್‍ಗಳನ್ನು ಅಳವಡಿಸಲಾಗಿದೆ ಎಂದರು.

      ಅಭಿಯಾನದಲ್ಲಿ ಪಾಲಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಸಾರ್ವಜನಿಕರು ಕೈಜೋಡಿಸಿದರೆ ಮಾತ್ರ ಅಭಿಯಾನ ಯಶಸ್ವಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಅಭಿಯಾನದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು ಹೇಳಿದರು.

      ನಗರದಲ್ಲಿ ಇ-ತ್ಯಾಜ್ಯ ಎಲ್ಲಿ ವಿಲೆವಾರಿ ಮಾಡಬೇಕೆಂಬ ಗೊಂದಲಗಳಿದ್ದವು. ಇದೀಗ ಬಿಬಿಎಂಪಿ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಟಿವಿ, ವಾಷಿಂಗ್ ಮಿಷನ್, ಕಂಪ್ಯೂಟರ್, ಪ್ರಿಡ್ಜ್, ಟೆಲಿಪೋನ್, ಐರನ್ ಬಾಕ್ಸ್ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಇ-ತ್ಯಾಜದ ಮೂಲಕ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

      ನಾಗರಿಕರಲ್ಲಿ ಬಳಕೆಯಾಗದ ಇ-ತ್ಯಾಜ್ಯವನ್ನು ಮನೆಗಳಲ್ಲಿ, ಕಚೇರಿಗಳಲ್ಲಿ ಇಟ್ಟುಕೊಳ್ಳುವ ಬದಲು ಪಾಲಿಕೆಗೆ ನೀಡಿದರೆ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಲಾಗುವುದು. ಅದಕ್ಕಾಗಿ ಒಂದು ತಿಂಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದರಂತೆ ಪಾಲಿಕೆ ಕೇಂದ್ರ ಕಚೇರಿ ಸೇರಿದಂತೆ ಎಲ್ಲ ಎಂಟು ವಲಯಗಳ ಕಚೇರಿಗಳ ಆವರಣದಲ್ಲಿ ಇ-ತ್ಯಾಜ್ಯ ಸಂಗ್ರಹಿಸುವ ಬಿನ್ ಗಳನ್ನು ಅಳವಡಿಸಲಾಗುತ್ತದೆ. ಅಲ್ಲಿ ತಮ್ಮ ಮನೆಗಳಲ್ಲಿರುವ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳನ್ನು ತಂದು ಹಾಕಬಹುದು ಎಂದು ತಿಳಿಸಿದರು.

      ಉಪ ಮೇಯರ್ ಭದ್ರೇಗೌಡ ಮಾತನಾಡಿ, ಬಿಬಿಎಂಪಿ ಹಾಗೂ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ಇ-ತ್ಯಾಜ್ಯ ಸಂಗ್ರಹಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಈ ಅಭಿಯಾನದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

     ಈ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರು, ವಿಶೇಷ ಆಯುಕ್ತರು(ಆಡಳಿತ ಮತ್ತು ಘನತ್ಯಾಜ್ಯ, ಸ್ವಯಂ ಸೇವಾ ಸಂಸ್ಥೆ ಸಂಸ್ಥಾಪಕರು ಹಾಗೂ ಪದಾಧಿಕಾರಿಗಳು ಸೇರಿದಂತೆ ಪ್ರಮುಖರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap