ಬೆಂಗಳೂರು
ರಾಜ್ಯದ ಜಿಲ್ಲಾ, ತಾಲೂಕು ಮತ್ತು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಬಿಬಿಎಸ್ ಗುತ್ತಿಗೆ ವೈದ್ಯರ ವೇತನವನ್ನು 45 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಆದರೆ, ಈ ವೇತನ ಪರಿಷ್ಕರಣೆ ಎಂಬಿಬಿಎಸ್ ಗುತ್ತಿಗೆ ವೈದ್ಯರ ಸೇವೆಯನ್ನು ಸಕ್ರಮಗೊಳಿಸುವ ಬೇಡಿಕೆಗೆ ಆಸ್ಪದ ನೀಡುವುದಿಲ್ಲ ಎಂದು ಆದೇಶ ಸ್ಪಷ್ಟಪಡಿಸಿದೆ. ಜೊತೆಗೆ, ಗ್ರಾಮೀಣ ಪ್ರದೇಶದ ಪ್ರಾದೇಶಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ವೈದ್ಯಾಧಿಕಾರಿ ಮತ್ತು ದಂತ ಆರೋಗ್ಯಾಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ರೋಸ್ಟರ್ ಮತ್ತು ಮೆರಿಟ್ ನಿಯಮಗಳ ಅನುಸಾರ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಇಲಾಖೆ ಅನುಮತಿ ನೀಡಿದೆ. ಈ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಖಾಯಂ ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳುವವರೆಗೆ ಈ ನೇಮಕಾತಿ ಜಾರಿಯಲ್ಲಿರಲಿದೆ ಎಂದು ಆದೇಶ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ