ತಿಪಟೂರು
ನಗರದ ವೈಟಿ ರಸ್ತೆಯ ವೈ ಟಿ ರಸ್ತೆಯ ಪೆಟ್ರೋಲ್ ಬಂಕ್ ಎದುರು ಕೊಬ್ಬರಿ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಜರುಗಿದೆ.ನಗರದ ಕೃಷಿ ಮಾರುಕಟ್ಟೆ ಸಮಿತಿಗೆ ಬರಬೇಕಿದ್ದ ಕೊಬ್ಬರಿ ತುಂಬಿದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ.
ಧಗಧಗನೆ ಹೊತ್ತಿ ಉರಿಯುತ್ತಿದ್ದ ಲಾರಿಯನ್ನು ಕಂಡು ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಸಂಭವಿಸಿತು. ವಿಷಯ ತಿಳಿದ ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಲಾರಿ ನಂದಿಸುವಲ್ಲಿ ಕೊನೆಗೂ ಯಶಸ್ವಿಯಾದರು.ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
