ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಕರೋನಾ ಜಾಗೃತಿ ಅಭಿಯಾನ

ಬಳ್ಳಾರಿ

      ಕರೋನಾ ವೈರಸ್ ಸಮುದಾಯದಲ್ಲಿ ಹರಡುವುದನ್ನು ತಡೆಗಟ್ಟಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜಾಗೃತಿ ಅಭಿಯಾನ ನಡೆಯಿತು.ಮಂಗಳವಾರ ನಗರದ ಪಾರ್ವತಿ ನಗರದಲ್ಲಿರುವ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ನಿವಾಸದಲ್ಲಿ ಆವರಣದಲ್ಲಿ ಕರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳು ಹಾಗೂ ರೋಗ ಹರಡದಂತೆ ವಹಿಸಬೇಕಾದ ಕ್ರಮಗಳ ಕುರಿತು ಆಟೋ ವಾಹನದ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸುವ ಜಾಗೃತಿ ಜಾಥಾಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೃಷ್ಣರಾಜ್ ಬಿ.ಅಸೋಡೆ ಅವರು ಚಾಲನೆ ನೀಡಿದರು.

     ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಸ್ವಚ್ಛತೆ ಕಾಪಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆತ್ಮ ವಿಶ್ವಾಸ ತುಂಬುವುದರ ಜೊತೆಗೆ ಸೋಂಕು ಹರಡುವುದನ್ನು ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

       ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳಾದ ಖಾಸಿಂ ಚೂರಿಖಾನ್,ಜಿಲ್ಲಾ ಕಾನೂನು ಸೇವೆಗಳ ಪ್ರಧಾನ ಕಾರ್ಯದರ್ಶಿ ನ್ಯಾ. ಅರ್ಜುನ್.ಎಸ್ ಮಲ್ಲೂರ್, ಪ್ಯಾನಲ್ ವಕೀಲರಾದ ಡಿ.ಚಂದ್ರಪ್ಪ ಅಯ್ಯಾಳಪ್ಪ, ಎಂ.ಭೀಮಪ್ಪ, ಗುರುಸಿದ್ಧಮೂರ್ತಿ ಸೇರಿದಂತೆ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾದ ಅರ್ಕಾನಿ, ಪೆÇಲೀಸ್ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಜಿಲ್ಲಾ ಕಾನೂನು ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಇದ್ದರು.

      ಈ ಜಾಗೃತಿ ಆಟೋ ವಾಹನವು ರೂಪನಗುಡಿ ರಸ್ತೆ, ಶ್ರೀರಾಂಪುರ ಕಾಲೋನಿ, ಬಾಂಬೆ ಪ್ರೆಸ್ ರಸ್ತೆ ಹಾಗೂ ಪ್ರಮುಖ ರಸ್ತೆಯಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಾದ ಮೋಕಾ, ಹೊಸ ಮೋಕಾ, ಹಳೇ ಮೋಕಾ, ಶಿವಪುರ, ಆಶೋಕ ನಗರ ಪ್ರದೇಶಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ನಾಳೆಯೂ ವಿವಿಧ ಗ್ರಾಮಗಳಿಗೆ ತೆರಳಿ ಜಾಗೃತಿ ಮೂಡಿಸಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link