ರಾಜ್ಯದಲ್ಲಿ ಮುಂದುವರೆದ ಕರೋನಾರ್ಭಟ..!

ಬೆಂಗಳೂರು:

      ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಭಾನುವಾರ ರಾಜ್ಯದಲ್ಲಿ ಸಾವಿನ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. 

      ಬೆಂಗಳೂರಿನ ಅಗ್ರಹಾರ ದಾಸರಹಳ್ಳಿ ನಿವಾಸಿಯಾಗಿದ್ದ 61 ವರ್ಷದ ವೃದ್ಧೆಯೊಬ್ಬರು ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಕೆಲ ದಿನಗಳ ಹಿಂದಷ್ಟೇ ದಾಖಲಾಗಿದ್ದರು. ಈ ವೇಳೆ ಮಹಿಳೆಯಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೆಂಗಳೂರು ನಗರದಲ್ಲಿ ಈ ವರೆಗೂ ಒಟ್ಟಾರೆ 13 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

     ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದ್ದು, ಈ ವರೆಗೂ 1968 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಇನ್ನೂ 3184 ಮಂದಿ ಸೋಂಕಿನಿಂದ ಕೋವಿಡ್-19 ಚಿಕಿತ್ಸೆ ನಿಯೋಜಿತ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link