ದೇಶದಲ್ಲಿ ಕಾಂಗ್ರೆಸ್‍ನಿಂದ ಮಾತ್ರ ಶಾಂತಿ ಸಾಧ್ಯ

ಚಿತ್ರದುರ್ಗ:

       ತ್ಯಾಗ ಬಲಿದಾನಕ್ಕೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಮತದಾರರು ಅಧಿಕಾರ ನೀಡಿದರೆ ಮಾತ್ರ ದೇಶವನ್ನು ಶಾಂತಿಯಿಂದಿರಿಸಲು ಸಾಧ್ಯ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್ ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಸವಲತ್ತಿಗಾಗಿ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು.

       ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿತು. ಈಗಿನ ಸಮ್ಮಿಶ್ರ ಸರ್ಕಾರ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯೋಜನೆಗಳನ್ನು ಮುಂದುವರೆಸಿದೆ ಯಾರು ಗಾಬರಿಯಾಗುವುದು ಬೇಡ. ನಮ್ಮ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಬಡವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದು ಭರವಸೆ ನೀಡಿದರು.

      ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಪಾಕ್ ಉಗ್ರರು ನಮ್ಮ ದೇಶದ ಯೋಧರನ್ನು ಬಲಿತೆಗೆದುಕೊಂಡಿರುವುದು ಅತ್ಯಂತ ಖಂಡನಾರ್ಹ. ದೇಶವನ್ನು ಕಾಯುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿರುವುದರಿಂದ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕೋಮುವಾದಿ ಬಿಜೆಪಿ.ಯನ್ನು ತೊಲಗಿಸುವಂತೆ ಮನವಿ ಮಾಡಿದರು.

      ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ನಾಗರಾಜ್ ಜಾನ್ಹವಿ, ಚಾಂದ್‍ಪೀರ್, ಎ.ಪಿ.ಎಂ.ಸಿ.ಉಪಾಧ್ಯಕ್ಷ ಜಯಣ್ಣ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ನೇತ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಜಿ.ಮನೋಹರ್ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link