ಬೆಂಗಳೂರು
ಹೂಡಿಕೆದಾರರಿಗೆ ನೂರಾರು ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿರುವ ಆಂಬಿಡೆಂಟ್ ಸಂಸ್ಥೆ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ, ಸಿಬಿಐ ಹಾಗೂ ಮೈಸೂರು ಉದಯಗಿರಿ ಪೊಲೀಸ್ ಠಾಣಾಧಿಕಾರಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮೈಸೂರು ಜಿಲ್ಲೆಯಾದ್ಯಂತ 1500 ಹೂಡಿಕೆದಾರರಿಗೆ ಸುಮಾರು 100 ಕೋಟಿ ರೂ. ವಂಚಿಸಿರುವ ಆರೋಪ ಎದುರಿಸುತ್ತಿರುವ ಆ?ಯಂಬಿಡೆಂಟ್ ಸಂಸ್ಥೆ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಮೈಸೂರಿನ ನಫೀಸ್ ಪಾಷಾ ಸೇರಿದಂತೆ 20 ಜನರು ಅರ್ಜಿ ಸಲ್ಲಿಸಿದ್ದರು. ನ್ಯಾ. ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು.
ಆಂಬಿಡೆಂಟ್ ಸಂಸ್ಥೆ ವಿರುದ್ಧ ವಂಚನೆಯ ದೂರು ದಾಖಲಿಸಲು ಪೊಲೀಸರು ನಿರಾಕರಿಸುತ್ತಿದ್ದಾರೆ. ಇದನ್ನು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಶ್ನಿಸಿದಾಗ, ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚಿಸಿತ್ತು. ಆ ಆದೇಶವನ್ನು ಕೂಡ ಪೊಲೀಸರು ಪಾಲಿಸುತ್ತಿಲ್ಲ. ಆಂಬಿಡೆಂಟ್ ಸಂಸ್ಥೆಯ ಮಾಲೀಕರು ಪ್ರಭಾವಿಗಳಾಗಿದ್ದು, ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ