ದಾವಣಗೆರೆ
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಕೊರೊನಾ ನಿಯಂತ್ರಣ ಹಿನ್ನೆಲೆ ಪ್ರಗತಿ ಪರಿಶೀಲನೆ ನಡೆಸಲು ಜಿಲ್ಲೆಯ ಜಗಳೂರು ಮತ್ತು ಹರಿಹರ ತಾಲ್ಲೂಕುಗಳಿಗೆ ಭೇಟಿ ನೀಡಿ ಬಂದ ನಂತರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ 19 ಪರೀಕ್ಷೆ ನಡೆಸುವ ಲ್ಯಾಬ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ವತಿಯಿಂದ ರೂ 90 ಲಕ್ಷ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು ಮೇ ತಿಂಗಳ 4 ಅಥವಾ 5 ನೇ ತಾರೀಖಿನ ಹೊತ್ತಿಗೆ ಲ್ಯಾಬ್‍ಗೆ ಸಿದ್ದತೆಗಳು ಆಗಲಿವೆ ಎಂದು ಮಾಹಿತಿ ನೀಡಿದರು.
ಮಹಾನಗರಪಾಲಿಕೆ ವತಿಯಿಂದ ಪಾಲಿಕೆ ಮೇಯರ್ ಹಾಗೂ ಆಯುಕ್ತರ ಸಮ್ಮುಖದಲ್ಲಿ ನಗರದ 26 ಸಾವಿರ ಬಡಕುಟುಂಬಗಳಿಗೆ ಸುಮಾರು ರೂ.1 ಕೋಟಿ 10 ಲಕ್ಷ ಮೊತ್ತದ ಆಹಾರ ಕಿಟ್‍ಗಳನ್ನು ವಿತರಿಸಲಾಗಲು ಕ್ರಮ ವಹಿಸಲಾಗಿದೆ. 13 ಸಾವಿರ ಲೀಟರ್ ಹಾಲು ಈಗಾಗಲೇ ಪ್ರತಿದಿನ ವಿತರಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿದವರಿಗೆ ಪಡಿತರ ನೀಡಲಾಗಿದ್ದು, ಪಡಿತರ ಚೀಟಿ ಇಲ್ಲದ 8 ಸಾವಿರ ಕುಟುಂಬಗಳನ್ನು ಗುರುತಿಸಲಾಗಿದ್ದು ಅವರಿಗೂ ಸಹ ಪಡಿತರ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 83 ಸಾವಿರ ಕಾರ್ಮಿಕರಿದ್ದು ಈಗಾಗಲೇ 71 ಸಾವಿರ ಕಾರ್ಮಿಕರ ಖಾತೆಗೆ ಈಗಾಗಲೇ ರೂ 2 ಸಾವಿರ ಜಮಾ ಮಾಡಲಾಗಿದೆ ಎಂದರು.
ಜಿಲ್ಲಾಡಳಿತದೊಂದಿಗೆ ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಆಹಾರ ಮತ್ತು ನಾಗರಿಕ ಸರಬರಾಜು, ಕೃಷಿ, ಎಪಿಎಂಸಿ ಸೇರಿದಂತೆ ಎಲ್ಲಾ ಇಲಾಖೆಗಳು ಸಹಕಾರದಿಂದ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಜಿಲ್ಲೆ ಆರೆಂಜ್ ಝೋನ್‍ನಲ್ಲಿ ಇದೀಗ ಗ್ರೀನ್ ಝೋನ್‍ಗೆ ಅಧಿಕೃತವಾಗಿ ತರಲು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
