ಚಳ್ಳಕೆರೆ
ರಾಜ್ಯದಲ್ಲಿ ಈಗಾಗಲೇ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗಿದ್ದು, ಜೊತೆ ಜೊತೆಯಲ್ಲೇ ಕ್ರಿಕೆಟ್ ಬೆಟ್ಟಿಂಗ್ ಸಹ ನಡೆಯುತ್ತಿದ್ದು, ಇದರ ಸುಳಿವು ಪಡೆದ ಇಲ್ಲಿನ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ಸಂಬಂಧಿಸಿದಂತೆ ಕೆಲವೊಂದು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿಗಳು, ಡಿವೈಎಸ್ಪಿ ಮತ್ತು ವೃತ್ತ ನಿರೀಕ್ಷಕ ಮಾರ್ಗದರ್ಶನದಲ್ಲಿ ಪಿಎಸ್‍ಐ ಕೆ.ಸತೀಶ್‍ನಾಯ್ಕ ಸಾರ್ವಜನಿಕರ ಮಾಹಿತಿಯನ್ನು ಅನುಸರಿಸಿ ಸೋಮಗುದ್ದು ರಸ್ತೆಯ ಮನೆಯೊಂದರ ಬಳಿ ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮಾಹಿತಿ ಮೇರೆಗೆ ಗಾಂಧಿನಗರದ ಸಂತೋಷ, ಕಾರ್ತಿಕ ಮತ್ತು ರಘುರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
