ಬಳ್ಳಾರಿ:
ನಗರದ ಬಳ್ಳಾರಿ ಬೆಟ್ಟದ ಪಕ್ಕದಲ್ಲಿನ ನಾಗಲಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಜನರನ್ನು ಭಯಭೀತಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ನಗರದ ಜನನಿಬಿಡ ಪ್ರದೇಶವಾದ ನಾಗಲಕೆರೆಯಲ್ಲಿ ಶುಕ್ರವಾರ ರಾತ್ರಿ ಮೊಸಳೆ ಪ್ರತ್ಯಕ್ಷವಾಗಿದೆ. ಮೊಸಳೆಯನ್ನು ಕಂಡ ಸ್ಥಳೀಯ ಭಯಭೀತರಾದ ಜನರು ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು, ಕೌಲ್ಬಜಾರ್ ಪೊಲೀಸ್ ಠಾಣೆ ಪೊಲೀಸರು ಮೊಸಳೆಯನ್ನು ಹಿಡಿದು ತುಂಗಭದ್ರಾ ಜಲಾಶಯದಲ್ಲಿ ಬಿಟ್ಟಿದ್ದಾರೆ ಎಂದು ಜಿಲ್ಲಾ ಆರಣ್ಯಾಧಿಕಾರಿ ಡಾ. ರಮೇಶ್ ಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








