ಜಗಳೂರು:
ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮೆಕ್ಕೆಜೋಳದ ಹೊಲಕ್ಕೆ ಬೆಂಕಿ ತಗುಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದ್ದು ಸುದ್ದಿ ತಿಳಿದ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮಿಂಚಿನ ವೇಗದಲ್ಲಿ ಧಾವಿಸಿ ಮುಂದಾಗುವ ಭಾರೀ ಅನಾವುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಟ್ಟಣದ ಹೊರವಲಯದ ಕ್ರೀಡಾಂಗಣದ ರಸ್ತೆ ಬದಿಯ ಅಜ್ಜಯ್ಯನ ದೇವಾಲಯದ ಮುಂಭಾಗದ ಬುಲ್ಡೇರ್ ಯಲ್ಲಮ್ಮನವರಿಗೆ ಸೇರಿದ ಎರಡು ಎಕರೆ ಮೆಕ್ಕೆಜೋಳ ಹೊಲದ ಮೇಲ್ಭಾಗದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್‍ನಿಂದ ಶನಿವಾರ ಮದ್ಯಾಹ್ನ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಈಗಾಗಲೇ ಕಾಳು ಕಟ್ಟಿದ ಮೆಕ್ಕೆಜೋಳದ ಬೆಳೆಗೆ ಬೆಂಕಿ ತಗುಲಿ ಶೇ.30ರಷ್ಟು ಭಾಗ ಸುಟ್ಟು ಹೋಗಿದ್ದು ಸುಮಾರು 30 ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ