ಬೆಂಗಳೂರು
ಕೈಲಾಂಚ ಹೋಬಳಿಯ ಬಾಳಕುಳಿದೊಡ್ಡಿಯಲ್ಲಿ ಶನಿವಾರ ಬೆಳಿಗ್ಗೆ ಅಡುಗೆ ಅನಿಲ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡು ಮನೆಯಲ್ಲಿದ್ದ ಅದೃಷ್ಟ ವಶಾತ್ ನಾಲ್ವರು ಪಾರಾಗಿರುವ ಘಟನೆ ನಡೆದಿದೆ.ಗ್ರಾಮದ ಬಿ.ಹೆಚ್ ರಾಜಣ್ಣ ಎಂಬುವರ ಮನೆಯಲ್ಲಿ ಬೆಳಗ್ಗೆ ಹಾಲು ಕಾಯಿಸುವ ಸಮಯದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು ಮನೆಯಲ್ಲಿದ್ದವರೆಲ್ಲಾ ಹೊರಗೊಡಿದ್ದಾರೆ ಬೆಂಕಿ ನಂದಿಸುವಷ್ಟರಲ್ಲಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿವೆ.
ಅದೃಷ್ಟವಶಾತ್ ಮನೆಯಲ್ಲಿದ್ದ ನಾಲ್ಕು ಮಂದಿ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ರಾಮನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ