ಹುಳಿಯಾರು:
ಹೋಬಳಿಯ ದಸೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಲ್ಯಾನಾಯ್ಕನ ತಾಂಡ ಬಳಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣ ಜಖಂಗೊಂಡಿದೆ.
ಮನೆ ದೇವರಾಜನಾಯ್ಕ ಅವರಿಗೆ ಸೇರಿದ್ದಾಗಿದೆ. ಗ್ರಾಮದ ಪಕ್ಕ ಇರುವ ಕೆರೆ ದಂಡೆಯ ಜಮೀನಿನಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಸಿಲಿಂಡರ್ ಸ್ಪೋಟಗೊಂಡಿದೆ. ಯಾರಿಗೂ ಅಪಾಯಗಳಾಗಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಬಂಗಾರದ ಅಭರಣ, ಹಣ, ರೇಷನ್ ಕಾರ್ಡ್, ಬಟ್ಟೆ, ದಿನಸಿ ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ರೂಪಾಯಿಗಳ ನಷ್ಟವಾಗಿದೆ ಎಂದು ಮನೆ ಮಾಲೀಕರು ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ