ದಾವಣಗೆರೆ:
ಕೊಮಾರನಹಳ್ಳಿಯಲ್ಲಿ ರಸ್ತೆ ದಾಟುತ್ತಿದ್ದ 9ವರ್ಷದ ಪುಟ್ಟ ಬಾಲಕನ ಮೇಲೆ ಅಡುಗೆ ಅನಿಲ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಬಾಲಕನನ್ನು ಅಜಯ್ (09) ಎಂದು ಗುರುತಿಸಲಾಗಿದೆ. ಲಾರಿಯ ಚಕ್ರ ಬಾಲಕನ ತಲೆ ಮೇಲೆ ಹರಿದ ಕಾರಣ ಬಾಲಕನ ತಲೆ ಛಿದ್ರವಾಗಿದ್ದು, ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಬಳಿಕ ರಾಜ್ಯ ಹೆದ್ದಾರಿ 25ರ ವಾಹನ ಸಂಚಾರ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ ಈ ಸಂಬಂಧ ಪೊಲೀಸರು ಪ್ರಕರಣವನ್ನು ದಾಕಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
