ದಾವಣಗೆರೆ:
ಜಿಲ್ಲಾ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ಅವರನ್ನು ಕುಂದಗೋಳ ವಿಧಾನಸಭೆಯ ಉಪಚುನಾವಣೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್ ಗುಂಡೂರಾವ್‍ರವರು ಆದೇಶಿಸಿದ್ದಾರೆ . ಕುಂದಗೋಳ ವಿಧಾನಸಭೆಯ ವ್ಯಾಪ್ತಿಗೆ ಬರುವ ಅದರಗುಂಚಿ ಜಿಲ್ಲಾಪಂಚಾಯಿತಿಗೆ ಸಂಬಂಧಿಸಿದ ಅಂಚಟಗೇರಿ ಗ್ರಾಮ ಪಂಚಾಯಿತಿಯ ಜವಾಬ್ದಾರಿಯನ್ನು ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾವತಿ ಶಿವಳ್ಳಿಯವರ ಪರ ಪ್ರಚಾರ ಮಾಡಿ ಗೆಲುವಿಗೆ ಶ್ರಮಿಸಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕೆಂದು ಆದೇಶ ಪ್ರತಿಯಲ್ಲಿ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.