ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಕಿದ ಅವಾಜ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವಕ್ಕಾದ ಘಟನೆ ಜರುಗಿತು. ಲಾಕ್‌ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೈಗೊಂಡಿದ್ದ ಹಲವು ತೀರ್ಮಾನಗಳನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧ ಹಾಗೂ ವಿಕಾಸಸೌಧ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮುಂದಾದ ಕಾಂಗ್ರೆಸ್ ನಾಯಕರಿಗೆ ಆಶ್ಚರ್ಯ ಕಾದಿತ್ತು.
ಭದ್ರತಾ ದೃಷ್ಟಿಯಿಂದ ಯಾವುದೇ ಪ್ರತಿಭಟನೆಯನ್ನು ಮಾಡಲು ಅನುಮತಿಯನ್ನು ನೀಡಿಲ್ಲ ಎಂದು ವಿಧಾನಸೌಧ ಪೊಲೀಸರು ಸೂಚನಾ ಪತ್ರ ಅಂಟಿಸಿದ್ದರು. ಇದರಿಂದ ಕೆರಳಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.
ಸರಿಯಾಗಿ ಘೋಷಣೆ ಹಾಕಿ ಎಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರನ್ನು ಗದರಿದರು. ಸಿದ್ದರಾಮಯ್ಯ ಅವರ ಆಕ್ರೋಶ ಎಷ್ಟರ ಮಟ್ಟಿಗೆ ಇತ್ತು ಅಂದರೆ ಪಕ್ಕದಲ್ಲಿದ್ದ ಗಟ್ಟಿ ವ್ಯಕ್ತಿತ್ವದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಒಂದು ಕ್ಷಣ ದಂಗಾದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆ ಜೆ ಜಾರ್ಜ್, ಆಂಜನೇಯ, ಬಿ. ಕೆ. ಹರಿಪ್ರಸಾದ್, ಪ್ರಿಯಾಂಕ್ ಖರ್ಗೆ, ಎಸ್ ಆರ್ ಪಾಟೀಲ್, ಐವಾನ್ ಡಿಸೋಜ, ಸತೀಶ್ ಜಾರಕಿಹೊಳಿ ಸೇರಿದಂತೆ 40ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದರು.