ಬಳ್ಳಾರಿ:
ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇರುವಂತೆಯೇ, ತುಂಗಾ ನದಿ ತೀರದಲ್ಲಿ ತುಂಗಾರತಿ ಮಾಡುವ ಮೂಲಕ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಸಚಿವ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ವಿಜಯನಗರ ಸಾಮ್ರಾಜ್ಯದ ಪರಂಪರೆಯನ್ನು ಮುಂದುವರಿಸುವ ಉದ್ದೇಶದಿಂದ ತುಂಗಾರತಿ ಕಾರ್ಯಕ್ರಮವನ್ನು ನದಿತಟದಲ್ಲಿ ಹಮ್ಮಿಕೊಳ್ಳಲಾಗಿತ್ತು ಮತ್ತು ಈ ದೃಷ್ಯವನ್ನು ನೋಡಲು ಜನಸಾಗರವೇ ಹರಿದು ಬಂದಿದ್ದು ವಿಶೇಷವಾಗಿತ್ತು.
ಮಾರ್ಚ್ ನಲ್ಲಿ ನಡೆಯಲಿರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ವಿಜಯನಗರ ಸಾಮ್ರಾಜ್ಯದ ಇತಿಹಾಸದಲ್ಲಿ ಉಲ್ಲೇಖಸಿದಂತೆ ಹಂಪಿ ದಸರಾ ಉತ್ಸವದ ವೇಳೆ ಈ ರೀತಿ ತುಂಗಾರತಿ ಮಾಡುವ ಮೂಲಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದರಂತೆ ಆ ಪರಂಪರೆಯನ್ನು ಮುಂದುವರಿಸೋ ನಿಟ್ಟಿನಲ್ಲಿ ಇದೀಗ ಹಂಪಿ ಉತ್ಸವದ ವೇಳೆ ತುಂಗಾರತಿ ಮಾಡುವ ಪರಂಪರೆಯನ್ನು ಹುಟ್ಟು ಹಾಕಲಾಗಿದೆ.
ಈ ವೇಳೆ ಮಾತನಾಡಿದ ಸಚಿವ ಡಿಕೆ.ಶಿವಕುಮಾರ್ ಹಿಂದಿನ ಪರಂಪರೆಯನ್ನು ನಮ್ಮ ಸರ್ಕಾರ ಮುಂದುವರಿಸುತ್ತಿದೆ. ಎಂ.ಪಿ. ಪ್ರಕಾಶ್ ಅವರ ಆಶಯದಂತೆ ಪ್ರತಿ ವರ್ಷ ಅದ್ಧೂರಿಯಾಗಿ ಉತ್ಸವ ನಡೆಯುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
