ಬೆಂಗಳೂರು
ಎದೆ ನೋವು, ಅಧಿಕ ರಕ್ತದೊತ್ತಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ನಗರದ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ 1.30 ರ ಸುಮಾರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಚಿಕಿತ್ಸೆ ವೇಳೆ ಯಾರಿಗೂ ಭೇಟಿಗೆ ಅವಕಾಶ ನೀಡದಿರಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.ಕೆಲವು ದಿನಗಳ ಹಿಂದಷ್ಟೇ ಡಿ.ಕೆ. ಶಿವಕುಮಾರ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಡಿಸ್ಚಾರ್ಜ್ ಆಗಿದ್ದರು.
ಡಿ. ಕೆ. ಶಿವಕುಮಾರ್ ಕಡ್ಡಾಯವಾಗಿ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸೂಚನೆ ನೀಡಿದ್ದಾರೆ. ಆದ್ದರಿಂದ, ಕುಟುಂಬ ಸದಸ್ಯರು ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಆಸ್ಪತ್ರೆಗೆ ಅವರನ್ನು ನೋಡಲು ಬರಬಾರದು ಎಂದು ಮನವಿ ಮಾಡಿದ್ದಾರೆ. ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಅಭಿಮಾನಿಗಳು, ಕಾರ್ಯಕರ್ತರು, ಗಣ್ಯರು ಪ್ರತಿದಿನ ಆಗಮಿಸುತ್ತಿದ್ದಾರೆ. ಆದ್ದರಿಂದ, ಡಿ. ಕೆ. ಶಿವಕುಮಾರ್ ಕುಟುಂಬ ಸದಸ್ಯರು ಮೂರು ದಿನ ಯಾರೂ ಭೇಟಿಗೆ ಆಗಮಿಸಬಾರದು ಎಂದು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ