ರಾಮನಗರ;
ಕಾಂಗ್ರೆಸ್ ಮತ್ತು ಜೆಡಿಎಸ್ ಒಡಗೂಡಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರ ರಚನೆಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಾರಣರಲ್ಲ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪ ತಿಳಿಸಿದರು.
ರಾಮನಗರದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಹಾಕದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರ ರಚನೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಕಾಂಗ್ರೆಸ್‍ನ ಗುಲಾಂ ನಬಿ ಆಜಾದ್ ಅವರೇ ಕಾರಣ ಎಂದ ಅವರು, ಈ ಸಂದರ್ಭದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸೇರಿಕೊಂಡರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಥಿಯನ್ನು ಹಾಕದಿದ್ದಲ್ಲಿ ನಾವೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
