ಬೆಂಗಳೂರು
ಕಿರು ಅರಣ್ಯ ಗಡಿ ಒತ್ತುವರಿ ಆರೋಪ ಪ್ರಕರಣದಲ್ಲಿ ಸಂಸದ ಡಿ ಕೆ ಸುರೇಶ್ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.
ರಾಮನಗರ ಜಿಲ್ಲೆಯ ಸಾತನೂರು ಹಾಗೂ ಕನಕಪುರ ಕ್ಷೇತ್ರಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದ ಫಿರ್ಯಾದನ್ನು ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ ಆದೇಶಿಸಿದೆ.
ಸಾತನೂರು ಹೋಬಳಿ ಕುನೂರು ಗ್ರಾಮದ ಅರ್ಕಾವತಿ ಕಿರು ಅರಣ್ಯ ಮತ್ತು ಕೋಟಿಕೊಪ್ಪ ಗ್ರಾಮದ ಮುನೇಶ್ವರ ಬೆಟ್ಟದ ಮೀಸಲು ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ ಎಂದು ಸೆಪ್ಟಂಬರ್ 2006ರಲ್ಲಿ ಅರಣ್ಯಾಧಿಕಾರಿಗಳು ದೂರು ದಾಖಲಿಸಿದ್ದರು.ಪ್ರಕರಣ ಸಂಬಂಧ 2018 ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ವಾದ ಮಂಡಿಸಿದ ಸುರೇಶ್ ಪರ ವಕೀಲರು,12 ವರ್ಷಗಳ ನಂತರ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.ಆದರೆ ವಿಳಂಬಕ್ಕೆ ಅಧಿಕಾರಿಗಳು ಕಾರಣ ನೀಡಿಲ್ಲ.ಆದ್ದರಿಂದ ಸಂಸದ ಡಿ ಕೆ ಸುರೇಶ್ ಅವರನ್ನು ಆರೋಪ ಮುಕ್ತಗೊಳಿಸಬೇಕೆಂದು ನ್ಯಾಯಾಲದಲ್ಲಿ ಕೋರಿದರು.ಆರೋಪ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಸಂಸದ ಡಿ ಕೆ ಸುರೇಶ್ ಅವರ ಮೇಲಿನ ಆರೋಪವನ್ನು ಮುಕ್ತಗೊಳಿಸಿ ಆದೇಶ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ