ಬೆಂಗಳೂರು ಗ್ರಾಮಾಂತರ: ಕಾಂಗ್ರೆಸ್‍ ಅಭ್ಯರ್ಥಿ ಡಿ.ಕೆ.ಸುರೇಶ್‍ಗೆ ಗೆಲುವು

ಬೆಂಗಳೂರು

    ಬೆಂಗಳೂರು ಗ್ರಾಮೀಣ ಕ್ಷೇತ್ರದ ಹಾಲಿ ಸಂಸದರೂ ಆಗಿರುವ ಡಿ.ಕೆ.ಸುರೇಶ್‍ ಜಯಗಳಿಸಿದ್ದಾರೆ.ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಶ್ವಥ್‍ ನಾರಾಯಣ ಗೌಡ ಅವರನ್ನು 2,06,870 ಮತಗಳಿಂದ ಪರಾಭವಗೊಳಿಸಿದ್ದಾರೆ.

    ಈ ಮೂಲಕ ಡಿ.ಕೆ.ಸುರೇಶ್‍ ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.2014ರ ಚುನಾವಣೆಯಲ್ಲಿ ಡಿ.ಕೆ.ಸುರೇಶ್‍ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮುನಿರಾಜು ಗೌಡ ಅವರನ್ನು ಸೋಲಿಸಿದ್ದರು.ಬೆಂಗಳೂರು ಗ್ರಾಮಾಂತರ ಕ್ಷೇತ್ರವು ರಾಜರಾಜೇಶ್ವರಿ ನಗರ, ಕನಕಪುರ, ಮಾಗಡಿ, ಕುಣಿಗಲ್, ರಾಮನಗರ, ಚನ್ನಪಟ್ಟಣ, ಆನೇಕಲ್‍, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ