ಡಿ ಆರ್ ಪಾಟೀಲರ ಆಯ್ಕೆ ಖಚಿತ : ಬಸವರಾಜ ಶಿವಣ್ಣನವರ

ಬ್ಯಾಡಗಿ:

      ಹಾವೇರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಅವರು ಲಕ್ಷಕ್ಕಿಂತಲೂ ಹೆಚ್ಚಿನ ಮತಗಳನ್ನು ಪಡೆದು ಆಯ್ಕೆಯಾಗಲಿದ್ದಾರೆಂದು ಮಾಜಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ವ್ಯಕ್ತ ಪಡಿಸಿದರು.

      ರವಿವಾರ ಅವರು ಸ್ಥಳೀಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಗದಗ ಜಿಲ್ಲೆ ಸೇರಿದಂತೆ ಕ್ಷೇತ್ರದಾದ್ಯಂತ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಲಿದೆ. ನಾನು ಕೂಡಾ ಕ್ಷೇತ್ರದ ಎಲ್ಲಾ ತಾಲೂಕುಗಳಲ್ಲಿ ಪ್ರವಾಸ ಮಾಡಿದ್ದು ಎಲ್ಲಾ ತಾಲೂಕುಗಳಲ್ಲಿ ಕಾಂಗ್ರೆಸ್ ಪರವಾದ ದಟ್ಟವಾದ ಅಲೆಯಿದೆ ಎಂದರು.

       ಮಾಜಿ ಪ್ರಧಾನ ಮಂತ್ರಿ ಮನಮೋಹನ್‍ಸಿಂಗ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳು ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಕೊಂಡಿದ್ದನ್ನು ಜನತೆ ಇಂದಿಗೂ ಸ್ಮರಣೆ ಮಾಡುತ್ತಲಿದ್ದಾರೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ, ಕ್ಷೀರಭಾಗ್ಯ, ಆರೋಗ್ಯಭಾಗ್ಯ, ರೈತರ ಸಾಲಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ರೈತರಿಗೆ ಹಾಗೂ ಬಡವರಿಗೆ ಕೊಡಮಾಡಿದ್ದಾರೆ. ಆದ್ದರಿಂದ ಮೈತ್ರಿ ಅಭ್ಯರ್ಥಿಯಾದ ಡಿ.ಆರ್.ಪಾಟೀಲರು ವಿಜಯಸಾಲಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ವೆಂದರು.

      ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಸತತವಾಗಿ ಕಳದೆರಡು ಬಾರಿ ಆಯ್ಕೆಯಾಗಿರುವ ಬಿಜೆಪಿಯ ಅಭ್ಯರ್ಥಿ ಸಂಸದ ಶಿವಕುಮಾರ ಉದಾಸಿ ಅವರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಕ್ಷೇತ್ರದ ಜನತೆಯ ಸಂಕಷ್ಟಗಳಿಗೆ ಸ್ಪಂದಿಸದೇ ಇರುವುದರಿಂದಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಅವರ ಪರವಾದ ನಿಲುವನ್ನು ಮತದಾರರು ತೆಗೆದುಕೊಳ್ಳುತ್ತಲಿದ್ದಾರೆಂದರು.

       ಕ್ಷೇತ್ರದ ಗದಗ ತಾಲೂಕಿನಲ್ಲಿ ನಾಲ್ಕು ಬಾರಿ ಶಾಸಕರಾಗಿ ಜಿಲ್ಲಾ ಪಂಚಾಯತ ವಿರೋಧ ಪಕ್ಷದ ನಾಯಕರಾಗಿ ಹಾಗೂ ಕಳೆದ 40 ವರ್ಷಗಳಿಂದ ಗದಗನ ಎಪಿಎಂಸಿ ಅಧ್ಯಕ್ಷರಾಗಿ ಡಿ.ಆರ್.ಪಾಟೀಲರು ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಡಿ.ಆರ್.ಪಾಟೀಲರು ಸರಳ ಸಭ್ಯ ವ್ಯಕ್ತಿಗಳಾಗಿದ್ದು, ಜನಪ್ರಿಯತೆನ್ನು ಹೊಂದಿದ ವ್ಯಕ್ತಿಗಳಾಗಿದ್ದಾರೆ. ಆದ್ದರಿಂದ ಏ.23 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಅವರನ್ನು ಮತದಾರರು ಹೆಚ್ಚಿನ ಮತಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು,

        ಈ ಸಂದರ್ಭದಲ್ಲಿ ತಾಲೂಕಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಕರಿಲಿಂಗಪ್ಪನವರ, ಪ್ರಧಾನಕಾರ್ಯದರ್ಶಿ ರಮೇಶ ಸುತ್ತಕೋಟಿ, ಬೀರಪ್ಪ ಬಣಕಾರ, ಖಾದರಸಾಬ ದೊಡ್ಡಮನಿ, ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ.ಬುಡ್ಡನಗೌಡ್ರ, ಶ್ರೀನಿವಾಸ ಕುರಕುಂದಿ ಸೇರಿದಂತೆ ಇನ್ನಿತರರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link