ಜು.16ರಿಂದ ಒಂದು ವಾರ ದಕ್ಷಿಣ ಕನ್ನಡ ಲಾಕ್ ಡೌನ್..!

ಮಂಗಳೂರು:

     ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 16ರಿಂದ ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಚಿವರು ಕಳುಹಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸೋಮವಾರ ಒಪ್ಪಿಗೆ ನೀಡಿದ್ದಾರೆ.ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಸಭೆ ನಡೆದಿತ್ತು. ಸಭೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ಲಾಕ್‌ಡೌನ್‌ ಮಾಡುವಂತೆ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ಲಾಕ್‌ಡೌನ್ ಪ್ರಸ್ತಾಪವನ್ನು ಕಳುಹಿಸಲಾಗಿತ್ತು.

    ಸೋಮವಾರ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ವಿಡಿಯೋ ಕಾನ್ಫರೆನ್‌ನಲ್ಲಿ ಲಾಕ್‌ಡೌನ್‌ಗೆ ಒಪ್ಪಿಗೆ ಸಿಕ್ಕಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.ಬುಧವಾರವರೆಗೆ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಗುರುವಾರದಿಂದ ಇಡೀ ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಗೆ ಬರಲಿದೆ. ಮುಂದಿನ ಒಂದು ವಾರಗಳ ಕಾಲ ಲಾಕ್‌ಡೌನ್‌ ಇರಲಿದೆ.

    ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸೋಂಕಿತರಿದ್ದಾರೆ. ಭಾನುವಾರ ಕೂಡ ಜಿಲ್ಲೆಯಲ್ಲಿ 196 ಪ್ರಕರಣಗಳು ದಾಖಲಾಗಿತ್ತು. ಇಲ್ಲಿಯವರೆಗೆ ಕರಾವಳಿ ಜಿಲ್ಲೆಯಲ್ಲಿ 2,222 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿದ್ದರೆ, ಕೇವಲ 760 ರೋಗಿಗಳಷ್ಟೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,419 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 41 ರೋಗಿಗಳು ಅಸುನೀಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap