ಡ್ರಗ್ಸ್ ಸಾಗಾಟ : ಮಂಗಳೂರು ಮೂಲದ ಡ್ಯಾನ್ಸರ್ ಬಂಧನ..!

ಬೆಂಗಳೂರು

    ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ .ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದಾರೆ.

    ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ನಂತರ ಹಿಂದಿ ಭಾಷೆಯ ಎಬಿಸಿಡಿ ಚಿತ್ರದಲ್ಲಿ ನಟಿಸಿದ್ದ.ಪ್ರಕರಣದಲ್ಲಿ ಮತ್ತೋರ್ವನನ್ನು ಬಂಧಿಸಲಾಗಿದ್ದು, ಅಕೀಲ್ ನೌಶೀಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಮುಂಬೈನಿಂದ ‘ಎಂಡಿಎಂಎ’ ಎಂಬ ನಿಷೇಧಿತ ಮಾದಕ ವಸ್ತುವನ್ನು ತಂದು ಮಂಗಳೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದರು .ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ