ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಎಂ ಎನ್ ಕೋಟೆ ದಂಡಿನ.ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಏ.6 ರಿಂದ ಏ.8 ರ ವರೆಗೆ ನಡೆಯಲಿದೆ.
ಏ.6ರಂದು ಶನಿವಾರ ಬೆಳಿಗ್ಗೆ 6 ಗಂಟೆಗೆ ಅಮ್ಮನವರಿಗೆ ವಿಶೇಷ ಅಲಂಕಾರ ಪಾನಕ ಫಲಹಾರ ಸೇವೆ ನಡೆಯಲಿದೆ. ಸಂಜೆ 5 ಗಂಟೆಗೆ ಅಮ್ಮನವರ ಉತ್ಸವ ಹಾಗೂ ಗಂಗಾ ಪೂಜಾ ಕಾರ್ಯಕ್ರಮ ನಡೆಯಲಿದೆ.
ಏ.7ರಂದು ಭಾನುವಾರ ಬೆಳಿಗ್ಗೆ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು 101 ಎಡೆ ಹಾಗೂ ಮಧ್ಯಾಹ್ನ 1 ಗಂಟೆಗೆ ಕಳಸ ಉತ್ಸವ ಹಾಗೂ ಆರತಿ ಗಟಿಬಾನ ನಡೆಮುಡಿಯೊಂದಿಗೆ ಊರಿನ ರಾಜಬೀದಿಗಳಲ್ಲಿ ಉತ್ಸವ ನಡೆಯಲಿದೆ.ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿದೆ.
ಏ.8 ರಂದು ಸಂಜೆ ಅಮ್ಮನವರ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಧಾನ ಅರ್ಚಕ ಸ್ವಾಮಿ ತಿಳಿಸಿದ್ದಾರೆ.