ನಾಡಹಬ್ಬ ಜನರ ಹಬ್ಬವಾಗಬೇಕು:ವಾಟಾಳ್ ನಾಗರಾಜ್

ಮೈಸೂರು

      ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಬಾರದು. ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೆ ಸಾಗದಿದ್ದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ ಮಾಡುತ್ತೇನೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

      ಮೈಸೂರಿನ ಜಯಚಾಮರಾಜ ವೃತ್ತದಲ್ಲಿ ರಾಜ್ಯ ಸರ್ಕಾರದ ಸರಳ ದಸರಾ ಆಚರಣೆ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ ಅವರು, ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಸೀಮಿತವಾಗಿ ದಸರಾ ಆಚರಣೆ ಸಲ್ಲದು. ಕೊರೋನಾ ಸೋಂಕು ನಿಯಂತ್ರಣ ಕ್ರಮಗಳ ನಡುವೆಯು ದಸರಾ ವೈಭವಕ್ಕೆ ಯಾವುದೇ ತೊಂದರೆ ಎದುರಾಗಬಾರದು ಎಂದರು.

      ನಾಡಹಬ್ಬ ದಸರಾವನ್ನು ಅದ್ದೂರಿಯಾಗಿಯೇ ಮಾಡಬಹುದು. ಸರಳ ದಸರಾ ಮಾಡಲು 15 ಕೋಟಿ ರೂ ಏಕೆ ಬೇಕು. ಸ್ಥಳೀಯ ಕಲಾವಿದವರ ಮೂಲಕ ನಾಡಿನ ಕಲೆ, ಸಂಸ್ಕೃತಿ ಎತ್ತಿ ಹಿಡಿಯುವ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ಸರ್ಕಾರ ದಸರಾ ವೈಭವಕ್ಕೆ ಯಾವುದೇ ಕೊರತೆ ಮಾಡಬಾರದು ಎಂದು ಹೇಳಿದರು.

    ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಸರಿಯಾದ ಕ್ರಮ ವಹಿಸಿಲ್ಲ. ಕರ್ನಾಟಕ ಸಾವಿನ ಮನೆಯಾಗಿದ್ದು, ವಿಕ್ಟೋರಿಯಾ ಆಸ್ಪತ್ರೆ ಯಮನ ಅರಮನೆಯಾಗಿದೆ. ಸರಿಯಾದ ಬೆಡ್ ವ್ಯವಸ್ಥೆ ಇಲ್ಲ. ವೆಂಟಿಲೇಟರ್ ಇಲ್ಲ. ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಈ ಕುರಿತು ರಾಜ್ಯದ ಜನರಿಗೆ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

    ರಾಜ್ಯದಲ್ಲಿ 7100ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಕೊರೋನಾಗೆ ಬಲಿಯಾದವರಿಗೆ ಸರ್ಕಾರ ತಕ್ಷಣ 5 ಲಕ್ಷ ರೂ ಪರಿಹಾರ ಕೊಡಬೇಕು. ಕೊರೋನಾ ಸೋಂಕಿಗೆ ಚಿಕಿತ್ಸೆ ಮತ್ತು ನಿಯಂತ್ರಣ ಕ್ರಮಗಳಿಗೆ ಮಾಡಿರುವ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ವಾಟಾಳ್ ನಾಗರಾಜ್ ಹೇಳಿದರು.
 
    ಹಿಂದಿ ಹೇರಿಕೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದ ವಾಟಾಳ್ ನಾಗರಾಜ್, ಬಿಜೆಪಿ, ಆರ್‍ಎಸ್‍ಎಸ್‍ಗೆ ಹಿಂದಿ ಮೇಲೆ ಪ್ರೀತಿ ಇದ್ದು, ಇದು ಉತ್ತರ ಭಾರತಕ್ಕೆ ಮಾತ್ರ ಸೀಮಿತವಾಗಬೇಕು. ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡಿದರೆ ಕ್ರಾಂತಿ ಆಗಲಿದೆ. ಮೈಸೂರಿನಿಂದಲೇ ಈ ಕ್ರಾಂತಿ ಆರಂಭವಾಗಲಿದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap