ದಸರಾ ಮಹೋತ್ಸವಕ್ಕೂ ತಟ್ಟಿದ ಚುನಾವಣಾ ನೀತಿ ಸಂಹಿತೆಯ ಬಿಸಿ

0
13

ಬೆಂಗಳೂರು

     ಮಂಡ್ಯ ಲೋಕಾಸಭಾ ಕ್ಷೇತ್ರಕ್ಕೆ ಮುಂದಿನ ತಿಂಗಳ 3ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆಯ ಬಿಸಿ ಮೈಸೂರು ದಸರಾ ಮಹೋತ್ಸವಕ್ಕೂ ತಟ್ಟಿದೆ.

      ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು, ಮಂಡ್ಯ ಲೋಕಾಸಭಾ ವ್ಯಾಪ್ತಿಗೆ ಸೇರಿರುವುದರಿಂದ ಮೈಸೂರು ಜಿಲ್ಲೆಗೂ ಮಾದರಿ ನೀತಿ ಸಂಹಿತೆ ಅನ್ವಯವಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

      ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ವರ್ಗದ ಜನಪ್ರತಿನಿಧಿಗಳು ದಸರಾ ಮಹೋತ್ಸವದಿಂದ ಹೊರಗುಳಿಯಬೇಕಾಗುತ್ತದೆ. ಈ ಮಧ್ಯೆ ನೀತಿ ಸಂಹಿತೆಯಿಂದ ವಿನಾಯಿತಿ ಕೋರಿ ಚುನಾವಣಾ ಆಯೋಗಕ್ಕೆ ಜಿಲ್ಲಾ ಆಡಳಿತ ಮನವಿ ಸಲ್ಲಿಸುವ ಸಾಧ್ಯತೆ ಇದೆ. 

       ಈಗಾಗಲೇ ವರದಿಯಾಗಿರುವಂತೆ ಮಂಡ್ಯ, ಶಿವಮೊಗ್ಗ ಮತ್ತು ಬಳ್ಳಾರಿ ಲೋಕಾಸಭಾ ಕ್ಷೇತ್ರಗಳಿಗೆ ಹಾಗೂ ಜಮಖಂಡಿ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳ 3ರಂದು ಉಪಚುನಾವಣೆ ನಿಗದಿಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here