ದಸರಾ ಮಹೋತ್ಸವಕ್ಕೆ ಬುಧವಾರ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ

0
23

ಮೈಸೂರು

     ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಡಿದ್ದು, ಬುಧವಾರ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ನೀಡಲಾಗುವುದು. ಅಂದು ಬೆಳಿಗ್ಗೆ 7 ಗಂಟೆ 5 ನಿಮಿಷದಿಂದ 7 ಗಂಟೆ 35 ನಿಮಿಷದ ತುಲಾ ಲಗ್ನದಲ್ಲಿ ಉತ್ಸವವನ್ನು ಇನ್ಪೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ ಉದ್ಘಾಟಿಸಲಿದ್ದಾರೆ.

     ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವಾರು ಸಚಿವರು, ಗಣ್ಯರು ಪಾಲ್ಗೊಳ್ಳಲಿದ್ದಾರೆ.

      ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಈ ತಿಂಗಳ 19ರಂದು ಪ್ರಮುಖ ಆಕರ್ಷಣೆ ಜಂಬೂ ಸವಾರಿ ನಡೆಯಲಿದೆ. ಅಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ, ವಿಜಯದಶಮಿ ಮೆರವಣಿಗೆ ಆರಂಭವಾಗಲಿದೆ. ಕ್ಯಾಪ್ಟನ್ ಅರ್ಜುನ ಆನೆಯ ಮೇಲೆ ಚಿನ್ನದ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ, ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ಸಿಗಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here