ಬೆಂಗಳೂರು
ರಾಜ್ಯ ಚುನಾವಣಾ ಆಯೋಗ ದಾವಣಗೆರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಗಳಿಗೆ ನವೆಂರ್ಬ 12ರಂದು ಚುನಾವಣೆ ಘೋಷಿಸಿದೆ.
ದಾವಣಗೆರೆಯ 45 ಹಾಗೂ ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‍ಗಳಿಗೆ ನ.12ರಂದು ನಡೆಯಲಿರುವ ಚುನಾವಣೆಗೆ ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನ.2ರಂದು ನಾಮಪತ್ರ ಪರಿಶೀಲಿಸಲಾಗುವುದು ಹಾಗೂ ನ.4 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿರಲಿದೆ. ನ. 12ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಅಗತ್ಯವಿದ್ದಲ್ಲಿ ನ.13ರಂದು ಮರು ಮತದಾನ ನಡೆಸಲಾಗುವುದು. ನ.14ರಂದು ಬೆಳಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ. ನ.14ರಂದು ಚುನಾವಣಾ ಪ್ರಕ್ರಿಯೆ ಅಂತಿಮಗೊಳ್ಳಲಿದೆ.
ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಆಯಾ ಜಿಲ್ಲೆಗಳಿಗೆ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ. ಈ ಪಾಲಿಕೆಗಳಲ್ಲಿ ಹಾಲಿ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯೇ ಪರಿಗಣನೆಯಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕನೇ ಶನಿವಾರ ಕೂಡ ಸಂಬಂಧಿಸಿದ ಚುನಾವಣಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿ ನಾಮಪತ್ರ ಸ್ವೀಕರಿಸಬೇಕು ಎಂದು ಆಯೋಗ ಪ್ರಕಟಣೆಯಲ್ಲಿ ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







