ಬಳ್ಳಾರಿ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವೈದ್ಯಕೀಯ, ಕೃಷಿ ಚಟುವಟಿಕೆಗಳಿಗೆ, ಸಾರಿಗೆ ವ್ಯವಸ್ಥೆ, ಕಟ್ಟಡ ಕಾಮಗಾರಿಗಳಿಗೆ ಹಾಗೂ ಇತರೆ ಕಾರ್ಯಕ್ರಮಗಳ ಕುರಿತು ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು.
ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಲಾಕ್ಡೌನ್ ಸಡಿಲಿಕೆ ಮಾಡಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನಡೆಯುವಂತಹ ಕಟ್ಟಡ ಕಾಮಗಾರಿಗಳಿಗೆ ಕಟ್ಟಡ ಕಾರ್ಮಿಕರಿಗೆ ಗುತ್ತಿಗೆದಾರರು ಅಲ್ಲಿಯೇ ಕಾರ್ಮಿಕರನ್ನು ಉಳಿಸಿಕೊಂಡ ಕಾಮಗಾರಿಯನ್ನು ಮಾಡಬಹುದು ಹಾಗೂ ತುರ್ತು ವೈದ್ಯಕೀಯ ಅರ್ಜಿಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ ಎಂದರು.
ಮದುವೆ ಹಾಗೂ ಇತರೆ ಸಮಾರಂಭ ಕಾರ್ಯಕ್ರಮಗಳ ಬಗ್ಗೆ ಸಾಮಾಜಿಕ ಅಂತರವನ್ನು ಪಾಲಿಸಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಿದರು. ಸಾರ್ವಜನಿಕರು ನೀಡಿದ ಅಹವಾಲುಗಳನ್ನು ಸ್ವೀಕರಿಸಿ ಅತ್ಯಂತ ಅಗತ್ಯವಿದ್ದರೆ ಮಾತ್ರ ಅನುಮತಿ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎ.ಮಂಜುನಾಥ್ ಅವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








