ತುಮಕೂರು
ಜಿಲ್ಲೆಯ 7ನೇ ಆರ್ಥಿಕ ಗಣತಿ ಕಾರ್ಯಕ್ರಮಕ್ಕೆ ಮೊಬೈಲ್ ಅಪ್ಲಿಕೇಶನ್ ಆ್ಯಪ್ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಕಾಮನ್ ಸರ್ವೀಸ್ ಸೆಂಟರ್ಸ್‍ನ ಸಹಯೋಗದಲ್ಲಿ ನಡೆದ 7ನೇ ಆರ್ಥಿಕ ಗಣತಿ ಕ್ಷೇತ್ರ ಕಾರ್ಯಾಚರಣೆ ಕಾರ್ಯಕ್ಕೆ ಮೊಬೈಲ್ ಆ್ಯಪ್ ತಂತ್ರಾಂಶವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಭಾರತದಲ್ಲಿ ಈಗಾಗಲೇ 6 ಆರ್ಥಿಕ ಗಣತಿಗಳನ್ನು ಮಾಡಲಾಗಿದ್ದು, 7ನೇ ಆರ್ಥಿಕ ಗಣತಿಯನ್ನು ಇದೇ ಮೊದಲ ಬಾರಿಗೆ ಡಿಜಿಟಲ್ ಮೊಬೈಲ್ ಆ್ಯಪ್ ಬಳಸಿಕೊಂಡು ಗಣತಿಯನ್ನು ಮಾಡಲಾಗುತ್ತಿದೆ ಎಂದರು.
ಗಣತಿ ಕಾರ್ಯವನ್ನು ಕಾಮನ್ ಸರ್ವೀಸ್ ಸೆಂಟರ್(ಸಿಎಸ್‍ಸಿ)ಗಳಿಗೆ ವಹಿಸಲಾಗಿದ್ದು, ಈ ಸೇವಾ ಕೇಂದ್ರದ ಸಿಬ್ಬಂದಿಗಳು ಪ್ರತಿ ಮನೆ ಮನೆಗಳಿಗೆ ಮತ್ತು ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ ಪ್ರಾಮಾಣಿಕ ಮತ್ತು ವಾಸ್ತವಿಕ ಮಾಹಿತಿಯನ್ನು ಕಲೆಹಾಕಬೇಕು. ಸಿಬ್ಬಂದಿಗಳು ತಮ್ಮ ಮನೆಗೆ ಬಂದಾಗ ಅವರಿಗೆ ಖಚಿತ ಮಾಹಿತಿಯನ್ನು ಸಾರ್ವಜನಿಕರು ನೀಡಬೇಕು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಕಾಮನ್ ಸರ್ವೀಸ್ ಸೆಂಟರ್‍ಗಳ ಜಿಲ್ಲಾ ವ್ಯವಸ್ಥಾಪಕರಾದ ಕೆ.ವಿ. ನಾರಾಯಣಸ್ವಾಮಿ, ಜ್ಞಾನಮಣಿ, ಆರ್.ಲೋಕೇಶ್ ಸೇರಿದಂತೆ ಸಿಎಸ್‍ಸಿ ಸಿಬ್ಬಂದಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/DSC_2343.gif)