ಹಾವೇರಿ
ನಗರದ ಹಳೆ ಧರ್ಮಶಾಲಾ ಕಟ್ಟಡ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ನೂತನ ಗಾಂಧಿ ಭವನ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ವೀಕ್ಷಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅನುದಾನದಲ್ಲ್ಲಿ ನಿರ್ಮಿತಿ ಕೇಂದ್ರ ನಿರ್ವಹಿಸುತ್ತಿರುವ ಗಾಂಧಿ ಭವನ ಕಟ್ಟಡದ ಪ್ರಗತಿಯನ್ನು ಮಂಗಳವಾರ ಪರಿಶೀಲನೆ ನಡೆಸಿದ ಅವರು ಗಾಂಧಿ ಭವನ ಕಟ್ಟಡ ಕಾಮಗಾರಿ ವಿನ್ಯಾಸ ಕುರಿತಂತೆ ಮಾಹಿತಿ ಪಡೆದರು. ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶ ಅವರಿಗೆ ಸೂಚನೆ ನೀಡಿದರು.
ಗಾಂಧಿ ಭವನ ಕಟ್ಟಡ ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಈಗಾಗಲೇ ನೆಲ ಹಂತಸ್ತಿನ ಕಾಮಗಾರಿ ಪೂರ್ಣಗೊಂಡಿದೆ. ಮೊದಲ ಮಹಡಿಯ ಕಾಮಗಾರಿ ಪ್ರಗತಿಯಲ್ಲಿರುವುದನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು ಕಟ್ಟಡದ ಪೂರ್ಣಮಾಹಿತಿಯನ್ನು ಪಡೆದರು.
ಚುರುಕು:
ದೇವಗಿರಿ ಯಲ್ಲಾಪೂರದ ನೂತನ ಬಡಾವಣೆಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆದರ್ಶ ವಿದ್ಯಾಲಯದ ಕಟ್ಟಡ ಕಾಮಗಾರಿ ಪ್ರಗತಿ ಪರಿವೀಕ್ಷಿಸಿದರು. ಈ ಸಂದರ್ಭದಲ್ಲಿ ಮಂದಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಭಿಯಂತರರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶ್, ವಾರ್ತಾಧಿಕಾರಿ ಬಿ.ಆರ್.ರಂಗನಾಥ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ