ತಾ. ಮಟ್ಟದ ಅಧಿಕಾರಿಗಳೊಂದಿಗೆ ಡಿ.ಸಿ. ಸಭೆ

ಶಿರಾ:

      ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರಾಕೇಶ್‍ಕುಮಾರ್ ಶಿರಾ ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

      ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದು ತಾಲ್ಲೂಕು ಮಟ್ಟದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕೂಡಾ ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಣೆಗೆ ಸಜ್ಜಾಗಬೇಕು. ಹೊರ ಜಿಲ್ಲೆ ಹಾಗೂ ನೆರೆಯ ತಾಲ್ಲೂಕುಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇಡುವಂತೆಯೂ ಅಧಿಕಾರಿಗಳನ್ನು ಎಚ್ಚರಿಸಿದರು.

      ನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಿವಿಧ ವಾರ್ಡುಗಳ ಪರಿಶೀಲನೆ ಮಾಡಿದರು. ಕೋವಿಡ್-19 ಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗೆಗಿನ ಮಾಹಿತಿಯನ್ನು ಪಡೆದರು.ತಹಶೀಲ್ದಾರ್ ನಾಹಿದಾ ಜಮ್ ಜಮ್, ತಾ.ಪಂ. ಇ.ಓ. ಮೋಹನ್ ಸೇರಿದಂತೆ ತಾಲ್ಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಈ ಸಂದರ್ಬದಲ್ಲಿ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link