ಮೈಸೂರು
ಮೈಸೂರು ಸಾಂಸ್ಕೃತಿಕವಾಗಿ ಮತ್ತು ಆರ್ಥಿಕವಾಗಿ ರಾಜ್ಯದಲ್ಲಿ ತಕ್ಕ ಮಟ್ಟಿಗೆ ಜೋರಾಗಿಯೆ ಇದೆ ಆದರೆ ಕಳೆದ 7 ವರ್ಷಗಳಿಂದ ಗುತ್ತಿಗೆದಾರನ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಸಿವಿಲ್ ಕೋರ್ಟ್ ಆದೇಶದಂತೆ ಮೈಸೂರು ಜಿಲ್ಲಾಧಿಕಾರಿ ಕಚೇರಿಯನ್ನು ಕಂಟ್ರಾಕ್ಟರ್ ಜಪ್ತಿ ಮಾಡಿದ್ದಾರೆ.
ಗುತ್ತಿಗರ ದಾರನಾದ ಚಿದಂಬರ ಎಂಬುವವರು 2013ರಲ್ಲಿ ಅಟಲ್ ಜಿ. ಜನಸ್ನೇಹಿ ಯೋಜನೆಯಡಿ ಡಿಸಿ ಕಚೇರಿಗೆ ಯುಪಿಎಸ್ ಸಪ್ಲೈ ಮಾಡಿದ್ದರು. ಆದರೆ ಯುಪಿಎಸ್ ಸಪ್ಲೈ ಮಾಡಿ 7 ವರ್ಷ ಕಳೆದರೂ ಮೈಸೂರು ಜಿಲ್ಲಾಡಳಿತ ಬಿಲ್ ಪಾವತಿಸಿರಲಿಲ್ಲ. ಈ ಕುರಿತು ಚಿದಂಬರ ಕೋರ್ಟ್ ಮೊರೆ ಹೋಗಿದ್ದರು.
ಈ ಸಂಬಂಧ ಬಿಲ್ ಪಾವತಿಸುವಂತೆ ಜಿಲ್ಲಾಡಳಿತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಆದರೆ ಜಿಲ್ಲಾಡಳಿತ ಕೋರ್ಟ್ ಆದೇಶ ನಿರ್ಲಕ್ಷ್ಯಿಸಿ ಬಿಲ್ ಪಾವತಿ ಮಾಡಿರಲಿಲ್ಲ. ಕೋರ್ಟ್ ಆದೇಶ ಉಲ್ಲಂಘನೆ ಹಿನ್ನೆಲೆ ಡಿಸಿ ಕಚೇರಿ ಜಪ್ತಿಗೆ ಕೋರ್ಟ್ ಸೂಚಿಸಿತ್ತು. ಕೋರ್ಟ್ ಆದೇಶದಂತೆ ಕಂಟ್ರಾಕ್ಟರ್ ಚಿದಂಬರ ಅವರು ಜಿಲ್ಲಾಧಿಕಾರಿಗಳ ಕಚೇರಿ ಜಪ್ತಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಕಂಪ್ಯೂಟರ್, ಕುರ್ಚಿ, ಸೋಫಾಗಳನ್ನು ಜಪ್ತಿಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರರು, ಕೋರ್ಟ್ ಜಪ್ತಿ ಆದೇಶಕ್ಕೆ ಮೇಲಿನ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದ್ದು, ಜಪ್ತಿ ಮಾಡಿದ ವಸ್ತುಗಳನ್ನು ಇಲ್ಲಿಯೇ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ