ದಾವಣಗೆರೆ :
ಹೊನ್ನಾಳಿ ತಾಲೂಕು ಆಸ್ಪತ್ರೆ ಹಾಗೂ ಹಿರೇಮಠ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಗುರುವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಹೊನ್ನಾಳಿಯ ತಾಲೂಕು ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಆಸ್ಪತ್ರೆಗೆ ಬರುವ ಸಾರ್ವಜನಿಕರನ್ನು ಕಾಯಿಸದೇ, ತ್ವರಿತಗತಿಯಲ್ಲಿ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಜಿಲ್ಲಾಧಿಕಾರಿಗಳು, ಒಳರೋಗಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು. ಆಸ್ಪತ್ರೆ ಒಳ ಮತ್ತು ಹೊರಗೆ ಸ್ವಚ್ಛತೆ ಕಾಪಾಡಲು ಹಾಗೂ ಔಷಧಿಗಳ ಪೂರೈಕೆ ಕುರಿತು ವೈದ್ಯಾಧಿಕಾರಿಗಳು ಸೂಕ್ತ ಗಮನ ಹರಿಸಬೇಕೆಂದು ತಾಕೀತು ಮಾಡಿದರು.
ಹೊನ್ನಾಳಿ ತಾಲೂಕಿನ ಹಿರೇಮಠ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳನ್ನು ಶುಚಿಯಾಗಿ ಇಡುವಂತೆ ಕ್ರಮ ಕೈಗೊಳ್ಳಲು ಅಂಗನವಾಡಿ ಕಾರ್ಯಕರ್ತೆಗೆ ಸೂಚನೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ