ಘನತ್ಯಾಜ್ಯ ವಿಲೆವಾರಿ ಘಟಕ್ಕೆ ಜಿಲ್ಲಾಧಿಕಾರಿ ಭೇಟಿ ..!

ಹಾವೇರಿ
    ಹಾವೇರಿ ನಗರದ ಹೊರವಲಯದ ಗೌರಾಪುರ ಘನತ್ಯಾಜ್ಯ ಘಟಕ್ಕೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
     ಸೋಮವಾರ ಗೌರಾಪುರ ಘನತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಮಾರ್ಗಸೂಚಿಯಂತೆ ತ್ಯಾಜ್ಯವಿಲೇವಾರಿ, ಕಾಂಪೋಸ್ಟ್ ಕಾರ್ಯ ಹಾಗೂ ಮರು ಬಳಕೆಗಳನ್ನು ಕ್ರಮಬದ್ಧವಾಗಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಇದೇ ಸಂದರ್ಭದಲ್ಲಿ ಆಂತರಿಕ ರಸ್ತೆ ಕಾಮಗಾರಿ, ವಿದ್ಯುತ್ ಪ್ಯಾನಲ್ ರೂಂ, ನಿರ್ಮಾಣ ಕಾಮಗಾರಿ, ಎರೆಹುಳು ಘಟಕ, ವಿಂಡೋ ರೋ ಪ್ಲಾಂಟ್, ಹಸಿಕಸ ಕಾಂಪೋಸ್ಟ್ ಘಟಕಗಳನ್ನು ಪರಿಶೀಲನೆ ನಡೆಸಿದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ವಿದ್ಯುತ್ ಕೆಲಸಗಳನ್ನು ಪೂರ್ಣಗೊಳಿಸಿ ಹೊಸ ಯಂತ್ರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.
    ಈ ಸಂದರ್ಭದಲ್ಲಿ ನಗರಸಭೆ ಆಯುಕ್ತರಾದ ಬಸವರಾಜ ಜಿಡ್ಡಿ, ಪರಿಸರ ಅಭಿಯಂತರ ಚಂದ್ರಕಾಂತ ಗುಡ್ಡಣ್ಣನವರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link