ಹಾವೇರಿ
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸೋಮವಾರ ಮೆಣಸಿನಕಾಯಿ ಮಾರುಕಟ್ಟೆಗೆ ಭೇಟಿ ನೀಡಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಮಾರುಕಟ್ಟೆಗೆ ಆಗಮಿಸುವ ವಾಹನ ಚಾಲಕರು, ಕ್ಲೀನರ್ ಹಾಗೂ ಹಮಾಲರ ಆರೋಗ್ಯ ತಪಾಸಣೆ, ಸುರಕ್ಷಿತ ಕ್ರಮಗಳ ಕುರಿತಂತೆ ಅಗತ್ಯ ಕ್ರಮವಹಿಸುವಂತೆ ಮಾರುಕಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾರುಕಟ್ಟೆ ಆವರಣದಲ್ಲಿ ಸ್ಥಾಪಿಸಲಾದ ಕೋವಿಡ್ ಸೋಂಕು ನಿವಾರಕ ಸುರಕ್ಷಾ ಸುರಂಗ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀಮತಿ ಶರಣಮ್ಮ, ಕೃಷಿ ಮಾರುಕಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ