ಹಾವೇರಿ
ತಾಲೂಕಿನ ಚೌಡದಾನಪುರದ ಶರಣ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯದಲ್ಲಿ ಮುಖ್ಯಮಂತ್ರಿಗಳಾದ ಬಿ,ಎಸ್,ಯಡಿಯೂರಪ್ಪ ಅವರು ಜನವರಿ 15 ರಂದು ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಅವರು ಭದ್ರತಾ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು.ಸೋಮವಾರ ಹಾವೇರಿ ತಾಲೂಕು ನರಸೀಪುರ ಗ್ರಾಮಕ್ಕೆ ಭೇಟಿ ಕಾರ್ಯಕ್ರಮದ ಸಿದ್ಧತೆ , ಹೆಲಿಪ್ಯಾಡ್ ಸಿದ್ಧತೆ ಕುರಿತಂತೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಶ್ರೀಗಳೊಂದಿಗೆ ಚರ್ಚಿಸಿದರು. ಶಾಸಕರಾದ ನೆಹರು ಓಲೇಕಾರ, ಉಪವಿಭಾಗಾಧಿಕಾರಿ ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ ಶಂಕರ್ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








