ಬೆಂಗಳೂರು
ಕೊರೊನಾ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ನೀಡಿದೆ. ಸಾರಿಗೆ ಕ್ಷೇತ್ರದ ಮೇಲೆಯೂ ಇದು ಪರಿಣಾಮ ಬೀರಿದೆ. ಸಿಬ್ಬಂದಿಗಳಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ವರದಿಗಳು ಹರುತ್ತಿವೆ.ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ವೇತನ ನೀಡದೆ ಇರುವುದಿಲ್ಲ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ಚಾಲಕ, ನಿರ್ವಾಹಕ, ತಾಂತ್ರಿಕ ಸಿಬ್ಬಂದಿಗೆ ಸರ್ಕಾರ ವೇತನ ಪಾವತಿ ಮಾಡಲಿದೆ ಎಂದು ಸಾರಿಗೆ ಸಚಿವರು ಹೇಳಿದ್ದಾರೆ. ಮೂರು ಮುಖ್ಯಮಂತ್ರಿಗಳು ಒಂದು ತಿಂಗಳ ವೇತನವನ್ನು ನೀಡಲು ಒಪ್ಪಿಗೆ ನೀಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರ ನಿಮ್ಮ ಜೊತೆ ಇದೆ ಎಂದು ಲಕ್ಷಣ ಸವದಿ ನೌಕರರಿಗೆ ಭರವಸೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ