ರಾಜ್ಯದ ರಸ್ತೆ ಅಭಿವೃದ್ಧಿಗಾಗಿ ಸಿಎಂಗೆ ಡಿಸಿಎಂ ಮನವಿ..!

ಬೆಂಗಳೂರು

     ಲೋಕೋಪಯೋಗಿ ಇಲಾಖೆಯ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ, ಅಭಿವೃದ್ದಿಪಡಿಸಲು ಮಂಜೂರಾತಿ ನೀಡುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ರಸ್ತೆಗಳನ್ನು ಎಂಡಿಆರ್ ರಸ್ತೆಗಳನ್ನಾಗಿ, ಎಂಡಿಆರ್ ರಸ್ತೆಗಳನ್ನು ರಾಜ್ಯ ಹೆದ್ದಾರಿ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ದಿಪಡಿಸಬೇಕು. ಕಾಮಗಾರಿಗಳ ಗುಣಮಟ್ಟದ ಪರಿಶೀಲನೆ ಹಾಗೂ ಅಪ್ರೆಂಟಿಸ್‍ಗಳಿಗೂ ತರಬೇತಿ ನೀಡಲು ಅನುಕೂಲವಾಗುವಂತೆ ಒಂದು ವರ್ಷದ ಅವಧಿಯ ಅಪ್ರೆಂಟಿಸ್ ಇಂಜಿನಿಯರ್ಗಳನ್ನು ನೇಮಕ ಮಾಡಿಕೊಳ್ಳಬೇಕು.

     ಆನಂದರಾವ್ ವೃತ್ತದಲ್ಲಿ ಅವಳಿ ಗೋಪುರ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ಯೋಜನಾ ವರದಿ ತಯಾರಿಕೆಗೆ ಸಮಾಲೋಚಕರನ್ನು ನೇಮಿಸಲು ಕ್ರಮ ವಹಿಸಲಾಗಿದೆ. ಇತರೆ ಇಲಾಖೆಗಳು 10 ಕೋಟಿಗೂ ಅಧಿಕ ಮೊತ್ತದ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಬೇಕು ಎಂದು ಉಪಮುಖ್ಯಮಂತ್ರಿಯವರು ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.

     2019-20 ನೇ ಸಾಲಿನಲ್ಲಿ ಕೊರೊನಾ ಸಂಕಷ್ಟದಲ್ಲೂ ಲೋಕೋಪಯೋಗಿ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ. ವಿವಿಧ ವಿವಿಧ ಯೋಜನೆಗಳಡಿ 1185 ಕಿ.ಮೀ.ರಾಜ್ಯ ಹೆದ್ದಾರಿ ಹಾಗೂ 5206 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿ ಪಡಿಸಲಾಗಿದೆ. 13,481 ಕಿ.ಮೀ ರಾಜ್ಯ ಹೆದ್ದಾರಿ ಹಾಗೂ 33,717 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ 1876 ಕಿ.ಮೀ ಉದ್ದದ ಸಿಮೆಂಟ್ ಕಾಂಕ್ರೀಟ್ ರಸ್ತೆÉ ಮತ್ತು ಚರಂಡಿಗಳ ನಿರ್ಮಾಣ ಮಾಡಲಾಗಿದೆ. 288 ಸೇತುವೆಗಳ ನಿರ್ಮಾಣ ಮಾಡಲಾಗಿದೆ.

     29 ಇಲಾಖೆ ಕಟ್ಟಡ, 17 ನ್ಯಾಯಾಲಯ ಕಟ್ಟಡ ಹಾಗೂ 11 ನ್ಯಾಯಾಧೀಶರ ವಸತಿ ಗೃಹಗಳ ನಿರ್ಮಾಣ ಮಾಡಲಾಗಿದ್ದು, 15 PಔಅSಔ ನ್ಯಾಯಾಲಯಗಳಿಗೆ ಮೂಲ ಸೌಕರ್ಯ ಒದಗಿಸಲಾಗಿದೆ. 1662 ಪ್ರವಾಹ ಪರಿಹಾರ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಬಾರ್ಡ್-25 ರಡಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 3243 ಸರ್ಕಾರಿ ಪ್ರಾಥಮಿಕ ಶಾಲೆಗಳ 6143 ಕೊಠಡಿಗಳ ಮರು ನಿರ್ಮಾಣವನ್ನು ರೂ. 718.65 ಕೋಟಿ ಮೊತ್ತದಲ್ಲಿ ಕೈಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಶಿವಮೊಗ ವಿಮಾನ ನಿಲ್ದಾಣ ಕಾಮಗಾರಿಯು ಟೆಂಡರ್ ಪ್ರಕ್ರಿಯೆಯಲ್ಲಿದೆ, ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

     ಇಲಾಖೆಯು ನೂತನವಾಗಿ ನೂತನ ಯೋಜನೆಗಳನ್ನು ರೂಪಿಸುತ್ತಿದ್ದು, ರಾಜ್ಯಾದ್ಯಂತ ಏಕರೂಪ ದರಪಟ್ಟಿಯನ್ನು ಪ್ರಕಟಿಸಲು ಕ್ರಮಕೈಗೊಳ್ಳಲಾಗಿದ್ದು, ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ಏಕರೂಪ ದರಪಟ್ಟಿಯನ್ನು ತಯಾರಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿಯು ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲಿ ವರದಿಯನ್ನು ಸಲ್ಲಿಸಲಿದೆ.

     ಅಂತರ್ಜಲ ವೃದ್ಧಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಸೇತುವೆಗಳ ತಳಭಾಗದಲ್ಲಿ 1ಮೀಟರ್ ತಡೆಗೋಡೆ ನಿರ್ಮಿಸಿ ನೀರಿನ ಸಂಗ್ರಹಣೆಗೆ ಕ್ರಮಕೈಗೊಳ್ಳಲಾಗಿದೆ. ಕೆರೆಗಳ ಮತ್ತು ಹಳ್ಳ/ನದಿ ಪಾತ್ರದ ಮಣ್ಣನ್ನು ರಸ್ತೆ ಕಾಮಗಾರಿಗಳಿಗೆ ಉಪಯೋಗಿಸಲು ಆದೇಶ ಹೊರಡಿಸಲಾಗಿದೆ. ಇಂಜಿನಿಯರ್ಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಕೋವಿಡ್-19ರ ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಕಾಮಗಾರಿಗಳನ್ನು ಪುನರ್ ಪ್ರಾರಂಭಿಸಲಾಗಿದೆ. ಇಲಾಖೆಯ ಕಾಮಗಾರಿಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಣೆ ಮಾಡಲು ಕ್ರಮವಹಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap