ನಟ ದರ್ಶನ್ ಆಸ್ಪತ್ರೆಗೆ ದಾಖಲು..!

ಮೈಸೂರು

   ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ‌.ಬುಧವಾರ ಬೆಳಿಗ್ಗೆ 4 ಗಂಟೆಗೆ ದರ್ಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ‌.ಗ್ಯಾಸ್ಟ್ರಿಕ್‌ ಪರಿಣಾಮ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದರ್ಶನ್, ಒಂದು ದಿನ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ದರ್ಶನ್​ ಅಭಿನಯದ ‘ರಾಬರ್ಟ್​’ ಸಿನಿಮಾದ ಚಿತ್ರೀಕರಣ ಇನ್ನೂ ನಡೆಯುತ್ತಿದೆ. ಹಾಡಿನ ಚಿತ್ರೀಕರಣಕ್ಕಾಗಿ ದರ್ಶನ್ ವಿದೇಶಕ್ಕೆ ತೆರಳಬೇಕಿತ್ತು. ಆದರೆ, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ವಿದೇಶಿ ಪ್ರವಾಸವನ್ನು ಚಿತ್ರತಂಡ ಕೈಬಿಟ್ಟಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link